ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ, ಸಿದ್ಧಾಂತಗಳು ಮಾರ್ಗದರ್ಶಕವಾಗಲಿ: ಸಚಿವ ಎಂಟಿಬಿ ನಾಗರಾಜು

Update: 2022-10-02 04:57 GMT

ಬೆಂಗಳೂರು : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ  ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ‌ತತ್ವ, ಆದರ್ಶ ಮತ್ತು ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಲಿ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ.

ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ 153ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 118ನೇ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಸಚಿವರು ಮಾತನಾಡಿದರು.

ಸಮಾರಂಭದಲ್ಲಿ ಖಾದಿ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ವಿ.ನಾಗರಾಜು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News