×
Ad

ಗಾಂಧಿ ಜಯಂತಿ: ಗಾಂಧಿ ಪ್ರತಿಮೆಗೆ ಮಾಲಾರ್ಪಣೆ

Update: 2022-10-02 12:56 IST

ಮಂಗಳೂರು, ಅ. 2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಕಾರ್ಯಕ್ರಮ ಮಂಗಳೂರು ಪುರಭವನದ ಮುಂಭಾಗದ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಯಿತು.

ದ.ಕ. ಜಿಲ್ಲಾಡಳಿತ, ಭಾರತ ಸೇವಾದಳ ಜಿಲ್ಲಾ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಟಾಗೋರ್ ಪಾರ್ಕ್ ಬಾವುಟಗುಡ್ಡೆ ಇದರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೇಶಭಕ್ತಿಗೀತೆ ಹಾಗೂ ಸರ್ವಧರ್ಮಿಯ ಪ್ರಾರ್ಥನೆ ನೆರವೇರಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಹೇಮಲತಾ ರಘು ಸಾಲ್ಯಾನ್, ನಯನಾ ಕೋಟ್ಯಾನ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಮುಂತಾದವರು ಉಪಸ್ಥಿತರಿದ್ದರು.

ಭಾರತ ಸೇವಾದಳದ ಬಶೀರ್ ಬೈಕಂಪಾಡಿ, ಪ್ರಭಾಕರ ಶ್ರೀಯಾನ್, ಮಂಜೇಗೌಡ, ರಾಘವೇಂದ್ರ, ಪ್ರೇಮ್‌ಚಂದ್, ಸುಮ, ಚಾಂದನಿ ಮುಂತಾದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News