ಖಾದಿ ಬಟ್ಟೆ ಖರೀದಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಎಂಟಿಬಿ ನಾಗರಾಜು

Update: 2022-10-02 12:21 GMT

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೂಡಿ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು , ಸಚಿವ  ಗೋವಿಂದ ಕಾರಜೋಳ ಅವರು ಇಂದು ಬೆಂಗಳೂರಿನ ಗಾಂಧಿ ಭವನದ ಬಳಿ ಇರುವ ಖಾದಿ ಎಂಪೋರಿಯಂನಲ್ಲಿ  ಖಾದಿ ಬಟ್ಟೆಗಳನ್ನು ಖರೀದಿಸಿದರು.

ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡಿ ಪುನಶ್ಚೇತನ ಗೊಳಿಸುವ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಖರೀದಿಸುವಂತೆ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ  ಶಾಸಕರುಗಳಿಗೆ ಪತ್ರ  ಬರೆದಿದ್ದ ಪೌರಾಡಳಿತ  ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ  ಎಂಟಿಬಿ ನಾಗರಾಜು ಅವರು ಸ್ವತಃ ತಾವೇ ಅದಕ್ಕೆ ಮೇಲ್ಪಂಕ್ತಿ ಹಾಕಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರ ಸಚಿವರುಗಳನ್ನು  ಕರೆದೊಯ್ದು  ಖಾದಿ  ಉತ್ಪನ್ನಗಳನ್ನು ಖರೀದಿಸಿದರು.

ಈ ಮಳಿಗೆಯನ್ನು  ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ, ಅವರು (ಅಂದಿನ ಹಣಕಾಸು ಸಚಿವರು) 15.11.1984ರಲ್ಲಿ ಉದ್ಘಾಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News