×
Ad

ಹಿರಿಯ ಮುಖಂಡರ ಒತ್ತಾಯದ ಮೇರೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಹೋರಾಟ: ಮಲ್ಲಿಕಾರ್ಜುನ ಖರ್ಗೆ

Update: 2022-10-02 14:56 IST
ಮಲ್ಲಿಕಾರ್ಜುನ ಖರ್ಗೆ (Photo:PTI)

ಹೊಸದಿಲ್ಲಿ: ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಕಣದಲ್ಲಿರುವ ಇನ್ನೋರ್ವ  ಅಭ್ಯರ್ಥಿ ಶಶಿ ತರೂರ್‌ ಗೆ ತಾನು ಹೇಳಿದ್ದೇನೆ.  ಪಕ್ಷದ ಹಿರಿಯ ಮುಖಂಡರ ಒತ್ತಾಯದ ಮೇರೆಗೆ ತಾನು ಅಧ್ಯಕ್ಷ ಸ್ಥಾನಕ್ಕಾಗಿ ಹೋರಾಟ ನಡೆಸಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು, "ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದ ಕಾರಣ, ನನ್ನ ಹಿರಿಯ ಸಹೋದ್ಯೋಗಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನ್ನನ್ನು ಕೇಳಿದ್ದರು, ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ.ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆ ಎಂದರು.

"ಡಾ. ತರೂರ್ ಅವರು ಮಾತನಾಡುತ್ತಿರುವ ಯಥಾಸ್ಥಿತಿ ಹಾಗೂ  ಬದಲಾವಣೆಯನ್ನು ಪ್ರತಿನಿಧಿಗಳು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನಿರ್ಧರಿಸುತ್ತದೆ. ಒಬ್ಬ ವ್ಯಕ್ತಿ ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ, ಅದನ್ನು ಒಟ್ಟಾಗಿ ತೆಗೆದುಕೊಳ್ಳಲಾಗುತ್ತದೆ’’ ಎಂದರು.

"ನಾನು ಮಹಾತ್ಮ ಗಾಂಧಿ ಹಾಗೂ  ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ನನ್ನ ಚುನಾವಣಾ ಪ್ರಚಾರವನ್ನು ಆರಂಭಿಸುತ್ತಿದ್ದೇನೆ. ನಾನು ಯಾವಾಗಲೂ ನನ್ನ ಸಿದ್ಧಾಂತ ಹಾಗೂ  ನೀತಿಗಳಿಗಾಗಿ ಹೋರಾಡುತ್ತೇನೆ. ನಾನು ಹಲವಾರು ಬಾರಿ ವಿರೋಧ ಪಕ್ಷದ ನಾಯಕ, ಮಂತ್ರಿ ಹಾಗೂ  ಶಾಸಕನಾಗಿದ್ದೇನೆ. ನಾನು ಈಗ ಮತ್ತೆ ಹೋರಾಡಲು ಬಯಸುತ್ತೇನೆ ಹಾಗೂ  ಅದೇ ನೈತಿಕತೆ ಮತ್ತು ಸಿದ್ಧಾಂತವನ್ನು ಮುಂದಕ್ಕೆ ತೆಗೆದುಕೊಳ್ಳಲು ಬಯಸುತ್ತೇನೆ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News