ಪುಲ್ವಾಮಾ: ಗೃಹ ಸಚಿವ ಅಮಿತ್ ಶಾ ಭೇಟಿಯ ಮುನ್ನಾದಿನ ಭಯೋತ್ಪಾದಕ ದಾಳಿ,ಓರ್ವ ಪೊಲೀಸ್ ಹುತಾತ್ಮ

Update: 2022-10-02 11:13 GMT
ಸಾಂದರ್ಭಿಕ ಚಿತ್ರ, Photo:NDTV

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.

"ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್‌ಪಿಎಫ್ ಹಾಗೂ  ಪೊಲೀಸರ ಜಂಟಿ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾದರು ಹಾಗೂ ಇನ್ನೋರ್ವ  ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ನಾಳೆ ಜಮ್ಮು -ಕಾಶ್ಮೀರಕ್ಕೆ ಆಗಮಿಸಲಿದ್ದಾರೆ. ಶಾ ಅವರು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ ರಾಜೌರಿ ಮತ್ತು ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News