ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ ಪರಿಹಾರ ನೀಡಲು ಅನುದಾನ ಬಿಡುಗಡೆ

Update: 2022-10-02 12:33 GMT
ಸಾಂದರ್ಭಿಕ ಚಿತ್ರ 

ಬೆಂಗಳೂರು: ‘ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ'ದಿಂದ ರಾಸುಗಳು ಮೃತಪಟ್ಟರೆ ಮಾಲಕರಿಗೆ ಪರಿಹಾರ ನೀಡಲು 2 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರುಗಳು ಮೃತಪಟ್ಟರೆ 5 ಸಾವಿರ ರೂ., ಹಸು ಸತ್ತರೆ 20 ಸಾವಿರ ರೂ. ಹಾಗೂ ಎತ್ತು ಸತ್ತರೆ 30 ಸಾವಿರ ರೂ.ಗಳನ್ನು ಪರಿಹಾರ ನೀಡಲಾಗುವುದು. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಚರ್ಮ ಗಂಟು ರೋಗ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News