ಪಾದಯಾತ್ರೆ ವೇಳೆ ಕಪ್ಪು ಬಟ್ಟೆ ಪ್ರದರ್ಶಿಸಲು ಬಿಜೆಪಿಯವರು ಮುಂದಾಗಿದ್ದಾರೆ: ಡಿ.ಕೆ‌.ಶಿವಕುಮಾರ್ ಆರೋಪ

Update: 2022-10-02 13:06 GMT
ಡಿ.ಕೆ‌.ಶಿವಕುಮಾರ್ 

ಮೈಸೂರು,ಅ.2: ರಾಹುಲ್ ಗಾಂಧಿ ಪಾದಯಾತ್ರೆ ವೇಳೆ ಬಿಜೆಪಿಯವರು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿ ಕಾರ್ಯಕರ್ತರುಗಳಿಗೆ ಕಪ್ಪು ಬಟ್ಟೆಯನ್ನು ಹಂಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆಲ್ಲಾ ನಾವು ಹೆದರುವವರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬದನವಾಳೂ ಗ್ರಾಮ್ ಖಾದಿ ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲು ಬಿಜೆಪಿಯವರು ಮುಂದಾಗಿ ಈಗಾಗಲೇ ಕಪ್ಪು ಬಟ್ಟೆಯನ್ನು ಹಂಚಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಬಳಿ ಮಾತನಾಡುತ್ತೇನೆ. ಒಂದು ವೇಳೆ ಇದನ್ನು ಮೀರಿ ಕಪ್ಪು ಬಾವುಟ ಪ್ರದರ್ಶಿಸಿದರೆ ಮುಂದೆ ಇದರ ಫಲವನ್ನು ನೀವೆ ಉಣ್ಣ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ತ್ಯಾಗ, ಬಲಿದಾನ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ. ನಾವು ಮೊಟ್ಟೆ ಎಸೆಯುವುದು, ಕಪ್ಪು ಬಾವುಟ ಪ್ರದರ್ಶಿಸುವಂತಹವ ಗೊಡ್ಡು ಬೆದರಿಕೆಗಳಿಗೆ ಹೆದರುವವರಲ್ಲ, ನೀವು ಇದೇ ರೀತಿ ನಡೆದುಕೊಂಡರೆ ನಮಗೂ ಏನು ಮಾಡಬೇಕು ಎಂದು ಗೊತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ನಾಲಿಗೆ ಎಲುಬಿಲ್ಲದೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಇವರು ಕೇಳಿರುವ ಹತ್ತು ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಈ ಪ್ರಶ್ನೆಗಳನ್ನು ಮುಖ್ಯಮಂತ್ರಿಗಳು ಕೇಳಲಿ ಆವಾಗ ಉತ್ತರಿಸುತ್ತೇನೆ ಎಂದು ಹೇಳಿದರು‌.

ಶಾಸಕ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದ ಡಿ‌.ಕೆ.ಶಿವಕುಮಾರ್, ಮೊದಲು ಬಿಜೆಪಿ ಪಕ್ಷದ ಬಗ್ಗೆ ಮಾತನಾಡಲಿ. ನಿಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎಂಬುದನ್ನು ಮೊದಲು ತಿಳಿಸಲಿ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News