ಎರಡನೇ ಟ್ವೆಂಟಿ-20: ದಕ್ಷಿಣ ಆಫ್ರಿಕಾ ಗೆಲುವಿಗೆ 238 ರನ್ ಗುರಿ ನೀಡಿದ ಭಾರತ

Update: 2022-10-02 15:35 GMT
ಕೆ.ಎಲ್.ರಾಹುಲ್, Photo:twitter

  ಗುವಾಹಟಿ, ಅ.2: ಸೂರ್ಯಕುಮಾರ್ ಯಾದವ್(61 ರನ್) ಹಾಗೂ ಕೆ.ಎಲ್.ರಾಹುಲ್(57 ರನ್) ಅರ್ಧಶತಕದ ಕೊಡುಗೆಯ ನೆರವಿನಿಂದ ಭಾರತವು ದಕ್ಷಿಣ ಆಫ್ರಿಕಾ ತಂಡಕ್ಕೆ ಎರಡನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ಗೆಲುವಿಗೆ 238 ರನ್ ಗುರಿ ನೀಡಿದೆ.

ರವಿವಾರ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿದ ದಕ್ಷಿಣ ಆಫ್ರಿಕಾವು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಭಾರತವು ಉತ್ತಮ ಆರಂಭದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 237 ರನ್ ಗಳಿಸಿತು. ಮಾಜಿ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 49, 28 ಎಸೆತ, 7 ಬೌಂಡರಿ, 1 ಸಿಕ್ಸರ್) ಕೇವಲ ಒಂದು ರನ್‌ನಿಂದ ಅರ್ಧಶತಕ ವಂಚಿತರಾದರು.

ಮೊದಲ ವಿಕೆಟಿಗೆ 96 ರನ್ ಜೊತೆಯಾಟ ನಡೆಸಿದ ರೋಹಿತ್ ಶರ್ಮಾ(43 ರನ್, 37 ಎಸೆತ, 7 ಬೌಂಡರಿ, 1 ಸಿಕ್ಸರ್)ಹಾಗೂ ರಾಹುಲ್(57 ರನ್, 28 ಎಸೆತ, 5 ಬೌಂಡರಿ, 4 ಸಿಕ್ಸರ್)ಭರ್ಜರಿ ಆರಂಭ ನೀಡಿದರು. ರಾಹುಲ್ ಔಟಾದಾಗ ಜೊತೆಯಾದ ಕೊಹ್ಲಿ ಹಾಗೂ ಸೂರ್ಯಕುಮಾರ್(61ರನ್, 22 ಎಸೆತ, 5 ಬೌಂಡರಿ,5 ಸಿಕ್ಸರ್) 3ನೇ ವಿಕೆಟ್ ಜೊತೆಯಾಟದಲ್ಲಿ 102 ರನ್ ಸೇರಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಆಫ್ರಿಕಾದ ಪರ ಕೇಶವ ಮಹಾರಾಜ್ 2 ವಿಕೆಟ್ ಪಡೆದು ಮಿಂಚಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News