​"ಮೇಲ್ತೆನೆ"ಯಿಂದ ಬ್ಯಾರಿ ಭಾಷಾ ದಿನಾಚರಣೆ

Update: 2022-10-03 04:40 GMT

ಮಂಗಳೂರು, ಅ.3: ಬ್ಯಾರಿ ಲೇಖಕರು ಮತ್ತು ಕಲಾವಿದರ ಸಂಘಟನೆ‌ "ಮೇಲ್ತೆನೆ"ಯ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮವು ಸೋಮವಾರ ನಾಟೆಕಲ್‌ನ ಅಯಾನ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.

ಪತ್ರಕರ್ತ ಹಂಝ ಮಲಾರ್ ಬ್ಯಾರಿ ಭಾಷಾ ದಿನಾಚರಣೆಯ ಹಿನ್ನಲೆಯ ಬಗ್ಗೆ ವಿವರಿಸಿದರು. ಅಧ್ಯಕ್ಷ ಮುಹಮ್ಮದ್ ಬಾಷಾ ನಾಟೆಕಲ್ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಮಾತನಾಡಿ "ಇಂಗ್ಲಿಷ್ ಹಾವಳಿಯ ಮಧ್ಯೆಯೂ ಬ್ಯಾರಿ ಭಾಷೆ ಜೀವಂತವಾಗಿರಲು ಮಾತೃಭಾಷೆಯ ಬಗ್ಗೆ ಬ್ಯಾರಿ ಭಾಷಿಗರಿಗೆ ಇರುವ ಅಭಿಮಾನವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಇಸ್ಮಾಯಿಲ್ ಮಾಸ್ಟರ್, ಉಪಾಧ್ಯಕ್ಷ ಮಂಗಳೂರ ರಿಯಾಝ್, ಜೊತೆ ಕಾರ್ಯದರ್ಶಿ ಆಸಿಫ್ ಬಬ್ಬುಕಟ್ಟೆ, ಮಾಜಿ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News