6 ರಾಜ್ಯಗಳ 7 ವಿಧಾನ ಸಭಾ ಸ್ಥಾನಗಳಿಗೆ ನವೆಂಬರ್ 3ರಂದು ಉಪ ಚುನಾವಣೆ

Update: 2022-10-03 18:25 GMT
Photo:PTI

ಲಕ್ನೋ, ಅ. 3: ಆರು ರಾಜ್ಯಗಳ 7 ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ನವೆಂಬರ್ 3ರಂದು ನಡೆಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. 

ಮತದಾನ ನಡೆದ ಮೂರು ದಿನಗಳ ಬಳಿಕ ಮತ ಎಣಿಕೆ ನಡೆಯಲಿದೆ ಎಂದು ಅದು ಹೇಳಿದೆ. 
ಬಿಹಾರದ ಮೊಕಾಮಾ ಹಾಗೂ ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂದೇರೀ ಪೂರ್ವ, ಹರ್ಯಾಣದ ಆದಂಪುರ, ತೆಲಂಗಾಣದ ಮುನುಗೋಡೆ, ಉತ್ತರಪ್ರದೇಶದ ಗೋಲಾ ಗೋಕರ್ಣನಾಥ್, ಒಡಿಶಾದ ಧಾಮನಗರ್ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಅದು ತಿಳಿಸಿದೆ. 
ಈ ಚುನಾವಣೆಯಲ್ಲಿ ಇವಿಎಂಗಳನ್ನು ಬಳಸಲಾಗುವುದು. ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯೋಗ ಹೇಳಿದೆ. ಕ್ರಿಮಿನಲ್ ಹಿನ್ನೆಲೆ ಇರುವ ಅಭ್ಯರ್ಥಿಗಳು ತಮ್ಮ ಪ್ರಕರಣಗಳನ್ನು ದಿನಪತ್ರಿಕೆ ಹಾಗೂ ಟೆಲಿವಿಷನ್‌ಗಳಲ್ಲಿ ಘೋಷಣೆ ಮಾಡುವಂತೆ ಚುನಾವಣಾ ಆಯೋಗ ಸೂಚಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News