ಮೈಸೂರು: ʼಭಾರತ್ ಜೋಡೊʼ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋನಿಯಾ ಗಾಂಧಿ ಆಗಮನ
Update: 2022-10-03 14:26 IST
ಮೈಸೂರು: ಹಿರಿಯ ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಅವರು ದೆಹಲಿಯಿಂದ ಸೋಮವಾರ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು.
ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಭಾರತ್ ಜೋಡೊ ಯಾತ್ರೆ ನಡೆಯುತ್ತಿದ್ದು ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ. ಅ.6ರಿಂದ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.