ಕೆಜಿ ಹಳ್ಳಿ ಗಲಭೆ | ನಿಷೇಧಿತ PFI ಕಾರ್ಯಕರ್ತರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ

Update: 2022-10-03 16:17 GMT

ಬೆಂಗಳೂರು, ಅ.3: ಕೆ.ಜಿ.ಹಳ್ಳಿ ಮತ್ತು ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ನಿಷೇಧಿತ ಸಂಘಟನೆ ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಕಾರ್ಯಕರ್ತರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲು ನಗರದ 11ನೆ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವು ಎನ್‍ಐಎ ವಿಶೇಷ ಕೋರ್ಟ್‍ಗೆ ವರ್ಗಾವಣೆಗೊಂಡಿದೆ.  

ಬಂಧನಕ್ಕೆ ಒಳಗಾಗಿರುವ ಪಿಎಫ್‍ಐ ಕಾರ್ಯಕರ್ತರನ್ನು ಅ.6ರಂದು ಎನ್‍ಐಎ ವಿಶೇಷ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲು ಕೋರಿ ಎಸಿಎಂಎಂ ಕೋರ್ಟ್‍ಗೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಯುಎಪಿಎ ಅಡಿಯಲ್ಲಿ ಕೇಸ್ ದಾಖಲಿಸಲು ಅನುಮತಿ ನೀಡಿದೆ. 

ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ಗಲಭೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News