ಅ.8-9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ

Update: 2022-10-03 15:29 GMT

ಉಡುಪಿ, ಅ.3: ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಡೆವಲಪ್ಮೆಂಟ್ ಸಮಿತಿ-ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಬೃಹತ್ ಉದ್ಯೋಗ ಮೇಳ ಅ.8 ಮತ್ತು 9ರಂದು ಕುಂತಳ ನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ, ಡಿಪ್ಲೋಮ, ಐಟಿಐ, ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ಚಾರ್ಟೆಡ್ ಅಕೌಂಟೆಂಟ್, ನರ್ಸಿಂಗ್ ಅಂತಿಮ ವರ್ಷದ ಪರೀಕ್ಷೆಗೆ ಕುಳಿತುಕೊಂಡುವರು ಈಗಾಗಲೇ ಓದಿದವರು ಅಥವಾ ೨-೩ ವರ್ಷ ಅನುಭವವುಳ್ಳ ಆದವರಿಗೆ ಭಾಗವಹಿಸಲು ಅವಕಾಶವಿದೆ. ಸುಮಾರು 25ಕ್ಕಿಂತಲೂ ಅಧಿಕ ಒಳ್ಳೆಯ ಕಂಪನಿಗಳು ರಿಜಿಸ್ಟ್ರಾರ್ ಮಾಡಿದ್ದು, ತುಂಬಾ ಉದ್ಯೋಗದ ಅವಕಾಶಗಳಿವೆ ಎಂದರು.

ಐಟಿ ಕ್ಷೇತ್ರ, ಬ್ಯಾಂಕಿಂಗ್, ರಿಟೇಲ್ ಕ್ಷೇತ್ರ, ಫೈನಾನ್ಸ್, ಸೇಲ್ಸ್, ಮಾರ್ಕೆಟಿಂಗ್, ಸರ್ವೀಸ್, ಫ್ಯಾಕ್ಟರಿಯಲ್ಲಿ ಹೋಟೆಲ್ ಉದ್ಯಮದಲ್ಲಿ ನರ್ಸಿಂಗ್, ಟೆಕ್ನಿಶಿಯನ್, ಸಿಎನ್‌ಎ ಆಪರೇಟರ್ ಮುಂತಾದ ಅನೇಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳಿವೆ. ಗ್ರಾಮೀಣ ಮಟ್ಟದಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ 25 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳಲ್ಲಿ ಭಾಗವಹಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ಅ.8ರಂದು ಬೆಳಗ್ಗೆ 9.45ಕ್ಕೆ ಉದ್ಯೋಗ ಮೇಳವನ್ನು ಎಂಆರ್‌ಜಿ ಗ್ರೂಫ್‌ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿರುವರು. ಸಚಿವ ವಿ.ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯ ಪ್ರಕಾಶ್ ಹೆಗ್ಡೆ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಭಾಗವಹಿಸಲಿರು ವರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಕೋಶಾಧಿಕಾರಿ ವಿಜಿತ್ ಶೆಟ್ಟಿ, ಟ್ರಸ್ಟಿನ ಸದಸ್ಯರಾದ ಪದ್ಮನಾಭ ಹೆಗ್ಡೆ, ಹೇಮಂತ್ ಶೆಟ್ಟಿ, ಬೆಳ್ಳೆ ಹರೀಶ್ ಶೆಟ್ಟಿ, ಬೆಳ್ಳೆ ಗೋಪಾಲ್ ಶೆಟ್ಟಿ, ನಿಂಜೂರ್ ರಮೇಶ್ ಶೆಟ್ಟಿ, ಹರೀಂದ್ರ ಹೆಗ್ಡೆ, ಭಾಸ್ಕರ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆಎಸ್ ಹೆಗ್ಡೆ ಇನ್‌ಟ್ಸ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನ ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ಆಫೀಸರ್ ಗುರುಪ್ರಸಾದ್ ಭಟ್, ಪ್ರೊ.ದಿವ್ಯರಾಣಿ ಪ್ರದೀಪ್ ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News