ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ

Update: 2022-10-03 16:31 GMT

ಮಂಗಳೂರು, ಅ.3: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಲೇಡಿಹಿಲ್ ಸಮೀಪ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೋಮವಾರ ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಅವರು ಮಹಾನ್ ಪುರುಷರ ಆದರ್ಶಗಳು ನಮಗೆ ಸದಾ ಪ್ರೇರಣೆಯಾಗಬೇಕು. ಈ ನಿಟ್ಟಿನಲ್ಲಿ  ಸರಕಾರವು ತನ್ನ ಆಡಳಿತದಲ್ಲಿ ನಾರಾಯಣ ಗುರುಗಳ ತತ್ವ, ಚಿಂತನೆ, ಆದರ್ಶಗಳನ್ನು ಅಳವಡಿಕೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರು, ಮುಡಾ ಕಮಿಷನರ್ ಭಾಸ್ಕರ್, ಕುದ್ರೋಳಿ ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ವೇದಕುಮಾರ್, ಕಾರ್ಪೊರೇಟರ್ ಗಣೇಶ್ ಕುಲಾಲ್, ಸಂಧ್ಯಾ ಆಚಾರ್ಯ, ಶಕೀಲಾ ಕಾವ, ಸಂಗೀತಾ, ಜಗದೀಶ್ ಬೋಳೂರು, ಬಿರುವೆರ್ ಕುಡ್ಲ ಸಂಸ್ಥಾಪಕ ಅಧ್ಯಕ್ಷ ಉದಯಪೂಜಾರಿ ಬಲ್ಲಾಳ್‌ ಬಾಗ್ ಮತ್ತಿತರರು ಉಪಸ್ಥಿತರಿದ್ದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News