ಚಾಮರಾಜನಗರ: ಜಿಂಕೆ ಬೇಟೆ; ಇಬ್ಬರು ಆರೋಪಿಗಳ ಬಂಧನ

Update: 2022-10-04 03:57 GMT

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೌದಳ್ಳಿ ವಲಯದ ಚೆನ್ನೂರ ಗಸ್ತಿನ ಮೂಲೆನಜರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.

ಹನೂರು ತಾಲ್ಲೂಕಿನ ಕೌದಳ್ಳಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿಗಳು ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್ ಎಲ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು.ಎನ್.ಎಂ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳಾದ ನೇತೃತ್ವದಲ್ಲಿ ದಾಳಿ ನಡೆಸಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಬಂಧಿಸಲಾಯಿತು.

ಅರಣ್ಯ ಇಲಾಖೆಯ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು, ಚನ್ನೂರು ಗಸ್ತಿನ ಮೂಲೆನಜರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದಾಳಿ ನೆಡೆಸಿ ಆರೋಪಿಗಳಾದ ತಿಪ್ಪಬೋವಿ ಮತ್ತು ಸಿದ್ದರಾಜು ಎಂಬವರನ್ನು ಬಂಧಿಸಲಾಗಿದೆ.

ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಂತೆ ಕಾನೂನು ಕ್ರಮ ಕೈಗೊಂಡು ಅರಣ್ಯಾಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News