ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
Update: 2022-10-04 15:54 IST
ಲಕ್ನೋ: ಸಮಾಜವಾದಿ ಪಕ್ಷದ(Samajwadi Party) ಮುಖ್ಯಸ್ಥ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಗುರುಗ್ರಾಂನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ವರದಿಯಾಗಿದೆ.
"ಮುಲಾಯಂ ಸಿಂಗ್ ಅವರು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದು, ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿದ್ದಾರೆ. ಅವರಿಗೆ ಸಮಗ್ರ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಮೇದಾಂತ ಆಸ್ಪತ್ರೆ ಹೊರಡಿಸಿದ ಆರೋಗ್ಯ ಬುಲೆಟಿನ್ ತಿಳಿಸಿದೆ ಮತ್ತು ಸಮಾಜವಾದಿ ಪಕ್ಷ ಟ್ವೀಟ್ ಮೂಲಕ ಮಾಹಿತಿ ನೀಡಿದೆ.