ಸುಳ್ಯ: ಕಾರು ಢಿಕ್ಕಿ; ದ್ವಿಚಕ್ರ ವಾಹನ ಸವಾರ ಅಣ್ಣ, ತಂಗಿ ಮೃತ್ಯು

Update: 2022-10-04 12:37 GMT
ನಿಶಾಂತ್ - ಮೋಕ್ಷಾ

ಸುಳ್ಯ: ತಾಲೂಕಿನ ಎಲಿಮಲೆ ಸಮೀಪದ ‌ಜಬಳೆಯಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಅಣ್ಣ, ತಂಗಿ ಇಬ್ಬರೂ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಬಾಜಿನಡ್ಕದ ನಿಶಾಂತ್ ಹಾಗು ಆತನ ಸಹೋದರಿ ಮೋಕ್ಷಾ ಎಂಬವರು ಮೃತರು ಎಂದು ತಿಳಿದುಬಂದಿದೆ. 

ನಿಶಾಂತ್ ತನ್ನ ತಂಗಿಯನ್ನು ಕರೆದುಕೊಂಡು ಎಲಿಮಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಇವರು ಪ್ರಯಾಣಿಸಿದ್ದ ದ್ವಿಚಕ್ರ ವಾಹನ ಮತ್ತು ಸುಳ್ಯ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ನಿಶಾಂತ್ ಮೃತಪಟ್ಟರೆ, ತೀವ್ರ ಗಾಯಗೊಂಡ ನಿಶಾಂತ್‌ನ ತಂಗಿ ಮೋಕ್ಷರನ್ನು ಆಸ್ಪತ್ರೆಗೆ ಕರೆ ತರಲಾಗಿತ್ತು‌. ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News