×
Ad

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ಗೆ ಜಾಮೀನು

Update: 2022-10-04 18:20 IST
ಅನಿಲ್ ದೇಶ್‌ಮುಖ್‌ 

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್(Anil Deshmukh) ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್. ಜೆ. ಜಮಾದಾರ್ ಅವರು ಜಾಮೀನು ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮುನ್ನ, ಆರು ತಿಂಗಳಿನಿಂದ ಬಾಕಿಯಿರುವ ಎನ್‌ಸಿಪಿ ನಾಯಕನ ಅರ್ಜಿ‌ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು.

ಅವರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್, ದೇಶ್‌ಮುಖ್ ಅವರ ವಯಸ್ಸು (72), ಆರೋಗ್ಯ ಮತ್ತು ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಗಳಿಲ್ಲದಿರುವ ಅಂಶವನ್ನು ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ವಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News