ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ

Update: 2022-10-04 14:48 GMT
Photo: Twitter/RohitashwT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ, ಅವರು ಉಕ್ರೇನ್-ರಶ್ಯ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದರು.

ಪ್ರಧಾನಿ ಕಾರ್ಯಾಲಯವು ನೀಡಿದ ಮಾಹಿತಿಯ ಪ್ರಕಾರ, ಸಮಸ್ಯೆಯನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅವಲಂವಿಸುವ ಹಾಗೂ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸುವ ಅಗತ್ಯವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ, ರಶ್ಯಾದ ಸೈನ್ಯವನ್ನು ಎದುರಿಸುತ್ತಿರುವ ಈ ಪೂರ್ವ ಯುರೋಪಿಯನ್ ದೇಶದ ಪರಮಾಣು ಸ್ಥಾಪನೆಗಳ ಸುರಕ್ಷತೆಯ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು ಎಂದು ndtv.com ವರದಿ ಮಾಡಿದೆ.

ಪ್ರಧಾನಮಂತ್ರಿ [ನರೇಂದ್ರ ಮೋದಿ] ಯುದ್ಧವನ್ನು ಶೀಘ್ರವಾಗಿ ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವನ್ನು ಪುನರುಚ್ಚರಿಸಿದರು. ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರ ಸಾಧ್ಯವಿಲ್ಲ ಎಂದು ಅವರು ತಮ್ಮ ದೃಢ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಯಾವುದೇ ಶಾಂತಿ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತವು ಸಿದ್ಧವಾಗಿದೆ ಎಂದು ಪ್ರಧಾನಿ ಕಾರ್ಯಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಉಕ್ರೇನ್‌ನಲ್ಲಿನ ಪರಮಾಣು ಸ್ಥಾಪನೆಗಳಿಗೆ ಉಂಟಾಗುವ ಅಪಾಯವು "ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ದುರಂತದ ದೂರಗಾಮಿ ಪರಿಣಾಮಗಳನ್ನು ಉಂಟುಮಾಡಬಹುದು" ಎಂದು ಪ್ರಧಾನಿ ಮೋದಿ ಹೇಳಿರುವುದಾಗಿ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News