ಹುಬ್ಬಳ್ಳಿ: ‘ಪೇ ಮೇಯರ್’ ಪೋಸ್ಟರ್‌ಗಳನ್ನು ಅಂಟಿಸಿದ ಕಾಂಗ್ರೆಸ್ ಮುಖಂಡರಿಗೆ ಮಾನಹಾನಿ ನೋಟಿಸ್ ಜಾರಿ

Update: 2022-10-05 12:51 GMT

ಹುಬ್ಬಳ್ಳಿ: ಇತ್ತೀಚೆಗೆ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರಸನ್ಮಾನ ಕಾರ್ಯಕ್ರಮದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ನಗರದ ವಿವಿಧೆಡೆ ‘ಪೇ ಮೇಯರ್’ ಪೋಸ್ಟರ್‌ಗಳನ್ನು ಅಂಟಿಸಿದ್ದ ಕಾಂಗ್ರೆಸ್ ಮುಖಂಡರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್‌ ಈರೇಶ ಅಂಚಟಗೇರಿ ಮಾನಹಾನಿ ನೋಟಿಸ್ ಜಾರಿ ಮಾಡಿದ್ದಾರೆ.

ವಕೀಲರ ಮೂಲಕ ನೋಟಿಸ್‌ ಜಾರಿ ಮಾಡಿರುವ ಅವರು, 'ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮಾನಹಾನಿಯ ಪರಿಹಾರವಾಗಿ ಮೂವರು ತಲಾ 1 ಕೋಟಿ ರೂ. ಮಹಾನಗರ ಪಾಲಿಕೆಗೆ ಸಂದಾಯ ಮಾಡಬೇಕು' ಎಂದು ತಿಳಿಸಿದ್ದಾರೆ.

ಕಳೆದ ವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಆಯೋಜಿಸಲಾಗಿತ್ತು. ಈ ವೇಳೆ ಪೆಂಡಾಲ್‌ ಹಾಕಿದ ಮೇಲೆ ಕೊಟೇಶನ್‌ ಕರೆಯಲಾಗಿದೆ. ದುಂದುವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ನಗರದ ವಿವಿಧೆಡೆ ‘ಪೇ ಮೇಯರ್’ ಪೋಸ್ಟರ್‌ಗಳನ್ನು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News