ಚಂದನವನಕ್ಕೆ ಮತ್ತೆ ಮರಳಿದ ರಮ್ಯಾ: ರಾಜ್‌ ಬಿ. ಶೆಟ್ಟಿ ಜೊತೆಗೆ ನೂತನ ಚಿತ್ರ

Update: 2022-10-05 14:28 GMT

ಬೆಂಗಳೂರು: ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು,  ಮೊದಲ ನಿರ್ಮಾಣದ ಸಿನೆಮಾ ಹೆಸರು ಘೋಷಿಸಿದ್ದಾರೆ. 

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಟೈಟಲ್​ ನ  ಈ ಸಿನೆಮಾಗೆ ರಮ್ಯಾ ಕೇವಲ ನಿರ್ಮಾಪಕಿ ಮಾತ್ರ ಅಲ್ಲದೆ ಚಿತ್ರದಲ್ಲಿ ಅವರು ಮುಖ್ಯ ಪಾತ್ರ ಕೂಡ ಮಾಡಲಿದ್ದಾರೆ. ಅವರ ಜೊತೆ ರಾಜ್​ ಬಿ. ಶೆಟ್ಟಿ ನಟಿಸಲಿದ್ದಾರೆ. ಈ ವಿಚಾರವನ್ನು ರಮ್ಯಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್​ ಬಿ. ಶೆಟ್ಟಿ ಅವರ ಗರುಡ ಗಮನ ವೃಷಭ ವಾಹನ ಚಿತ್ರದ ತಾಂತ್ರಿಕ ತಂಡವೇ ಇಲ್ಲಿ ಕೆಲಸ ಮಾಡಲಿದೆ. ಮಿಧುನ್‌ ಮುಕುಂದನ್‌ ಅವರ ಸಂಗೀತ, ಪ್ರವೀಣ್‌ ಶ್ರೀಯಾನ್‌ ಅವರ ಸಂಗೀತವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News