ಆತ್ಮಹತ್ಯೆ
Update: 2022-10-05 21:16 IST
ಕೊಣಾಜೆ: ಜಂಕ್ಷನ್ ಸಮೀಪದ ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬುಧವಾರ ನಡೆದಿದೆ.
ಮೃತರನ್ನು ಯಶವಂತ ಆಚಾರಿ (44) ಎಂದು ಗುರುತಿಸಲಾಗಿದೆ. ಮಂಜನಾಡಿ ನಿವಾಸಿಯಾಗಿರುವ ಇವರು ಕೊಣಾಜೆಯಲ್ಲಿ ಸಹೋದರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸಹೋದರಿ ಮನೆಯಿಂದ ಹೊರಗೆ ಹೋಗಿದ್ದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.