×
Ad

ಬೆಂಗಳೂರು | ಮತಾಂತರ ಆರೋಪ: ಇಬ್ಬರ ಬಂಧನ

Update: 2022-10-05 21:58 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.5: ಯುವಕನೋರ್ವನನ್ನು ಮತಾಂತರ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ಬನಶಂಕರಿ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಶಬ್ಬೀರ್ ಹಾಗೂ ಎ.ರೆಹ್ಮಾನ್ ಎಂಬುವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಬಲವಂತವಾಗಿ ಧರ್ಮದ ಭೋದನೆ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ ಮೂಲದ ಶ್ರೀಧರ್ ಎಂಬುವರು 12 ಜನರ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕೃತ್ಯ ಬನಶಂಕರಿ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಹಣಕಾಸಿನ ತೊಂದರೆ ಕುರಿತು ವ್ಯಕ್ತಿ ಹೇಳಿಕೊಂಡಾಗ ಬನಶಂಕರಿಯ ಧಾರ್ಮಿಕ ಕೇಂದ್ರಕ್ಕೆ ಕರೆ ತಂದು ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿ ಮತಾಂತರ ಮಾಡಿದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ ತನಿಖೆ ನಡೆಸಿದ ಬನಶಂಕರಿ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ತನಿಖೆ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News