ಉಡುಪಿ: ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿಯಾತ್ರೆಗೆ ಸ್ವಾಗತ

Update: 2022-10-06 14:22 GMT

ಉಡುಪಿ, ಅ.6: ಐತಿಹಾಸಿಕ ಕಿತ್ತೂರು ಉತ್ಸವವನ್ನು ಈ ಬಾರಿ ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನ್ನೆಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಇಂದು ಉಡುಪಿ ಜಿಲ್ಲೆಯನ್ನು ತಲುಪಿದ್ದು, ಉಡುಪಿ ನಗರದ ಜೋಡುಕಟ್ಟೆ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜ್ಯೋತಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭೆಯ ಸದಸ್ಯರಾದ ರಜನಿ ಹೆಬ್ಬಾರ್, ರಶ್ಮಿ ಚಿತ್ತರಂಜನ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾರ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News