ಶಿಯೊಮಿ ಖಾತೆ ಜಪ್ತಿ: ಸಕ್ಷಮ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

Update: 2022-10-06 18:40 GMT

ಬೆಂಗಳೂರು, ಅ.6: ಶಿಯೊಮಿ ಇಂಡಿಯಾ ಕಂಪೆನಿಗೆ ಸೇರಿದ 5,551.27 ರೂ. ಬೃಹತ್ ಮೊತ್ತವನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ(ಈ.ಡಿ) ಆದೇಶವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ 1999ರ ಅಡಿ ರಚಿಸಿರುವ ಸಕ್ಷಮ ಪ್ರಾಧಿಕಾರವು ಕಾಯಂಗೊಳಿಸಿದ್ದನ್ನು ಪ್ರಶ್ನಿಸಿ ಕಂಪೆನಿಯ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಸರಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. 

ಜಪ್ತಿ ಆದೇಶವನ್ನು ಸಕ್ಷಮ ಪ್ರಾಧಿಕಾರವು ಕಾಯಂಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯನ್ನು ಹೈಕೋರ್ಟ್ ನಿರಾಕರಿಸಿದೆ. 

ಕಾಯಿದೆಯ ಅನ್ವಯ ಜಪ್ತಿ ಆದೇಶ ಮಾಡಿರುವ ಈ.ಡಿ ನಿರ್ದೇಶನಾಲಯದ ವ್ಯಾಪ್ತಿಯ ವಿಚಾರವನ್ನು ಸಕ್ಷಮ ಪ್ರಾಧಿಕಾರ ನಿರ್ಧರಿಸಬೇಕು. ಸಕ್ಷಮ ಪ್ರಾಧಿಕಾರದ ಮುಂದೆ ಈಗಾಗಲೇ ಜಪ್ತಿ ಆದೇಶ ಇಟ್ಟಿರುವುದರಿಂದ ಈ ಆದೇಶ ಮಾಡಿದ 60 ದಿನಗಳ ಒಳಗೆ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ನ್ಯಾಯಪೀಠವು ಈ ಹಿಂದೆ ಆದೇಶಿಸಿತ್ತು. 

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News