ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನ ಕೊಲೆ
Update: 2022-10-07 15:12 IST
ತುಮಕೂರು: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋರ್ವನ ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ತುಮಕೂರು ನಗರದ ಜಿಸಿಆರ್ ಕಾಲನಿಯ ಮುಬಾರಕ್ ಪಾಷಾ (35) ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದು, ಈ ವೇಳೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಬಾರಕ್ ಪಾಷಾ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದರು. ಕೊಲೆಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.