ಭಾರತ್ ಜೋಡೊ ಯಾತ್ರೆಯಲ್ಲಿ ಕವಿತಾ, ಇಂದಿರಾ ಲಂಕೇಶ್ ಭಾಗಿ

Update: 2022-10-07 14:09 GMT
ರಾಹುಲ್ ಗಾಂಧಿ ಜೊತೆ ಕವಿತಾ ಲಂಕೇಶ್ ಮತ್ತು ಇಂದಿರಾ ಲಂಕೇಶ್

ಬೆಂಗಳೂರು: 2017 ರಲ್ಲಿ ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಮತ್ತು ಕವಿತಾ ಲಂಕೇಶ್ ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.

ಈ ಸಂಬಂಧ ತನ್ನ ಟ್ವಿಟರ್ ಖಾತೆಯಲ್ಲಿ ಫೋಟೊ ಹಂಚಿಕೊಂಡಿರುವ ರಾಹುಲ್ ಗಾಂಧಿ, ''ಗೌರಿ ಸತ್ಯದ ಪರ ನಿಂತರು ಗೌರಿ ಧೈರ್ಯವಾಗಿ ನಿಂತರು ಗೌರಿ ಸ್ವಾತಂತ್ರ್ಯಕ್ಕಾಗಿ ನಿಂತರು ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿ, ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ!'' ಎಂದು ಬರೆದುಕೊಂಡಿದ್ದಾರೆ. 

ಭಾರತ್ ಜೋಡೊ ಪಾದಯಾತ್ರೆಯೂ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆಯುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಪಾಲ್ಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News