SSCಯಿಂದ 20 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2022-10-07 13:55 GMT

ಮಂಗಳೂರು: ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission-SSC) ನಿಂದ ಇಪ್ಪತ್ತು ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯು Combined Graduate Level Examination-2022 ಮೂಲಕ ನಡೆಯಲಿದೆ. ಅರ್ಜಿ ಸಲ್ಲಿಸಲು 2022ರ ಅಕ್ಟೋಬರ್ 8 ಕೊನೆಯ ದಿನವಾಗಿದೆ.

ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜುಗಳಿಂದ ಈಗಾಗಲೇ ಪದವಿ ಪಡೆದಿರುವ ಅಥವಾ ಪದವಿಯ ಕೊನೆಯ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ SSC ಜಾಲತಾಣ:  https://www.ssc.nic.in ಭೇಟಿ ನೀಡಬಹುದು.

ಈಗಾಗಲೇ ಪದವಿ ಪಡೆದಿರುವವರಿಗೆ ಮತ್ತು ಎಲ್ಲಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇದೊಂದು ಸುವರ್ಣ ಅವಕಾಶ, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಸೂಕ್ತ ಪರೀಕ್ಷಾ ತರಬೇತಿಯನ್ನು ಕಾಲೇಜಿನಲ್ಲಿ ನೀಡಲಾಗುವುದು.

ಹೆಚ್ಚಿನ ವಿವರಗಳಿಗೆ ಮೊಬೈಲ್ 9731579338 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News