ಬೆಂಗಳೂರು: ಆಟೋರಿಕ್ಷಾ ಸೇವೆ ನಿಲ್ಲಿಸಲು ಓಲಾ, ಉಬರ್ ಗೆ ರಾಜ್ಯ ಸರಕಾರ ನೋಟಿಸ್

Update: 2022-10-07 15:17 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.7: ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಕಂಪೆನಿಗಳು ಆಟೋ ಸೇವೆ ಒದಗಿಸುವುದು ಕಾನೂನು ಬಾಹಿರವಾಗಿದ್ದು, ಅದನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೋಗೆ ಕರ್ನಾಟಕ ಸಾರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. 

ಓಲಾ ಮತ್ತು ಉಬರ್ ಎರಡು ಕಿಲೋಮೀಟರ್ ಗಿಂತ ಕಡಿಮೆ ದೂರವಿದ್ದರೂ ಕನಿಷ್ಠ 100 ರೂ. ವಿಧಿಸುತ್ತಿರುವ ಬಗ್ಗೆ ಹಲವಾರು ಪ್ರಯಾಣಿಕರು ಸಾರಿಗೆ ಇಲಾಖೆಗೆ ದೂರು ನೀಡಿದ್ದರು. ಇದಾದ ಬೆನ್ನಲ್ಲೇ ಇಲಾಖೆ ಈ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಆಟೋ ದರ ಮೊದಲ 2 ಕಿಮೀಗೆ 30 ರೂ. ಇದ್ದು, ನಂತರದ ಪ್ರತಿ ಕಿಲೋ ಮೀಟರ್‍ಗೆ 15 ರೂ. ಇದೆ. ಆದರೆ ಅಗ್ರಗೇಟರ್‍ಗಳು ಇದಕ್ಕಿಂತ ಹೆಚ್ಚಿನ ದರ ಪಡೆಯುತ್ತಿದ್ದಾರೆ.

ಕಂಪೆನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗ ನಿಲ್ಲಿಸಬೇಕು ಹಾಗೂ ಟ್ಯಾಕ್ಸಿಗಳಲ್ಲಿಯೂ ಪ್ರಯಾಣಿಕರಿಗೆ ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು ಎಂದು ಇಲಾಖೆಯ ಸೂಚನೆ ನೀಡಿದೆ. ಆದೇಶ ಪಾಲಿಸಲು ವಿಫಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News