PSI ನೇಮಕಾತಿ ಹಗರಣ: ಮತ್ತೊಬ್ಬ ಸಬ್ ಇನ್ಸ್ ಪೆಕ್ಟರ್ ಬಂಧನ

Update: 2022-10-07 14:38 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.7: ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಸಬ್ ಇನ್ಸ್ ಪೆಕ್ಟರ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಕೆ.ಆರ್.ಪುರ ಸಂಚಾರ ಠಾಣೆ ಸಬ್ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯ ಬಂಧಿತ ಆರೋಪಿಯಾಗಿದ್ದಾನೆ. ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ಅಧಿಕಾರಿಗಳ ನಡುವೆ ಪಿಎಸ್ಸೈ ಸುಬ್ರಹ್ಮಣ್ಯ ಏಜೆಂಟ್ ಆಗಿ ಕೆಲಸ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.

ಕೋಲಾರ ಮೂಲದ ಸುಬ್ರಹ್ಮಣ್ಯ, 2016ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಂಡಿದ್ದರು.  ಬೆಂಗಳೂರು ನಗರಕ್ಕೆ ನಿಯೋಜನೆಗೊಂಡ ಸುಬ್ರಹ್ಮಣ್ಯ, ಕೆ.ಆರ್.ಪುರ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ 3 ವರ್ಷ ಸೇವೆ ಸಲ್ಲಿಸಿ ಬಳಿಕ ಸಂಚಾರ ಠಾಣೆಗೆ ವರ್ಗವಾಗಿದ್ದರು. 

ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಮತ್ತು ಪ್ರಥಮ ದರ್ಜೆ ಸಹಾಯಕ ಹರ್ಷ ಅವರ ಜತೆ ಸ್ನೇಹವಿತ್ತು. ಪಿಎಸ್ಸೈ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳಿಗೆ ಮಧ್ಯವರ್ತಿಯಾಗಿ ಸುಬ್ರಹ್ಮಣ್ಯ ಡೀಲ್ ಕುದುರಿಸಿದ್ದರು ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News