ಮಂಗಳೂರು | ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ
Update: 2022-10-08 11:11 IST
ಮಂಗಳೂರು, ಅ.8: ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಊರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು.
ಇದೀಗ ಮಾಹಿತಿ ನೀಡಿರುವ ಬಜ್ಪೆ ಪೊಲೀಸರು, 'ಸುನೀಲ್ ಬಜಿಲಕೇರಿಯನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು' ಎಂದು ತಿಳಿಸಿದ್ದಾರೆ.
ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜೀಲಕೆರಿ ಪ್ರಸಕ್ತ ಬಿಜೆಪಿ ನಾಯಕರ ಕಾರ್ಯವೈಖರಿಯ ಕಟುಟೀಕಾಕಾರರಾಗಿದ್ದಾರೆ.
ಇದನ್ನೂ ಓದಿ: ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ