×
Ad

ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರ ಅಧಿಕಾರ ಮೊಟಕು ಮಾಡಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ

Update: 2022-10-08 11:46 IST

ಬೆಂಗಳೂರು: 'ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕು ಮಾಡಿಲ್ಲ' ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,   'ಗ್ರಾಮ ಪಂಚಾಯತ್ ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾಪವನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ.ಈ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿದ್ದು, ಪ್ರಸ್ತಾವನೆ ಬಂದಲ್ಲಿ ಅದನ್ನು ತಿರಸ್ಕರಿಸುವ ಭರವಸೆ ನೀಡಿದ್ದಾರೆ.ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಮತ್ತು ಸದಸ್ಯರುಗಳಿಗೆ ಗೊಂದಲ ಬೇಡ' ಎಂದು ತಿಳಿಸಿದ್ದಾರೆ.

'ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ಅಧಿಕಾರ ಕೊಡುವ ಪ್ರಶ್ನೆಯೇ ಇಲ್ಲ' ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News