×
Ad

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಆರೋಪ: ಸಾಫ್ಟ್‌ವೇರ್‌ ಇಂಜಿನಿಯರ್ ಪ್ರಶಾಂತ್ ಸೆರೆ

Update: 2022-10-08 18:09 IST

ಬೆಂಗಳೂರು, ಅ.8: ಬೆಂಗಳೂರಿನ ವಿಧಾನಸೌಧ ಕಟ್ಟಡಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಆರೋಪ ಪ್ರಕರಣ ಸಂಬಂಧ ಸಾಫ್ಟ್‌ವೇರ್‌ ಇಂಜಿನಿಯರೊಬ್ಬರನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಹೆಬ್ಬಗೋಡಿ ನಿವಾಸಿ 41 ವರ್ಷದ  ಸಾಫ್ಟ್‌ವೇರ್‌ ಇಂಜಿನಿಯರ್ ಪ್ರಶಾಂತ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.  ಈತನನ್ನು ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ಸರಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ‘ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಸ್ಫೋಟಗೊಳ್ಳಲಿದೆ’ ಎಂದಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಪರಿಶೀಲನೆ ನಡೆಸಿದಾಗ  ಇದೊಂದು ಹುಸಿ ಕರೆ ಎಂಬುದು ತಿಳಿಯಿತು. 

ನಂತರ, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿ ಬಂಧಿಸಲಾಗಿದ್ದು, ಈ ಸಂಬಂಧ ಕರೆ ಮಾಡಲು ಕಾರಣವೇನು ಎಂಬುದು ವಿಚಾರಣೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News