ಅ.10ರಿಂದ ಕೊರಗ ಮಕ್ಕಳ ರಂಗ ತರಬೇತಿ ಶಿಬಿರ
Update: 2022-10-08 19:43 IST
ಉಡುಪಿ, ಅ.8: ಸಮುದಾಯ ಕುಂದಾಪುರ ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಜಿಲ್ಲಾ ಸಂಘಟನಾ ಸಮಿತಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾಡಿನ ಮಕ್ಕಳ ಬಣ್ಣದ ಹೆಜ್ಜೆ’ ಕೊರಗ ಮಕ್ಕಳ ರಂಗ ತರಬೇತಿ ಶಿಬಿರವನ್ನು ಅ.10ರಿಂದ16ರವರೆಗೆ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಹಾಡಿಮನೆ ಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕುಂದಾಪುರ ಮತ್ತು ಬೈಂದೂರು ತಾಲೂಕಿನ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗಾಗಿ ಆಯೋಜಿಸಲಾದ ಈ ಶಿಬಿರದಲ್ಲಿ 50 ಕೊರಗ ಮಕ್ಕಳು ಭಾಗವಹಿಸಲಿದ್ದಾರೆ. ರಂಗ ನಿರ್ದೇಶಕ ವಾಸುದೇವ ಗಂಗೇರ ಶಿಬಿರದ ನಿರ್ದೇಶಕರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.