×
Ad

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2022-10-08 20:04 IST

ಪುತ್ತೂರು: ವರ್ಷದ ಹಿಂದೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಪಾಟ್ರಕೋಡಿ ಎಂಬಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪಾಟ್ರಕೋಡಿಯಲ್ಲಿ ಗಾಂಜಾ ಪ್ರಕರಣವೊಂದನ್ನು ವರ್ಷಗಳ ಹಿಂದೆ ಪತ್ತೆ ಹಚ್ಚಿದ್ದ ಪೊಲೀಸರು ಅರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪೈಕಿ 2ನೇ ಆರೋಪಿಯಾದ  ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಎಂಬಾತ  ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ಮೇಲೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ಪೊಲೀಸರು ದ.ಕಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ, ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್.ಐ ಚಂದ್ರ ಮತ್ತು ಹೆಡ್‍ಕಾನ್‍ಸ್ಟೇಬಲ್ ಪರಮೇಶ್ವರ್ ಅವರು ಆರೋಪಿ ಮಹಮ್ಮದ್ ಶಫೀಕ್ ಅವರನ್ನು ಮಂಜೇಶ್ವರದಲ್ಲಿ ಬಂಧಿಸಿ ಮಂಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News