×
Ad

ಕೋಟ: 10ರ ಹುಟ್ಟೂರ ಕಾರಂತೋತ್ಸವಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ

Update: 2022-10-08 20:49 IST
ಸಚಿವ ಜೆ.ಸಿ.ಮಾಧುಸ್ವಾಮಿ

ಉಡುಪಿ, ಅ.8:  ಅ.10ರಂದು ಅಪರಾಹ್ನ 3:30ಕ್ಕೆ ಕೋಟದಲ್ಲಿ ನಡೆಯುವ ಕಾರಂತರ ಹುಟ್ಟೂರ ಉತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ರಾಜ್ಯದ ಕಾನೂನು, ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸುವ ಕೋಟತಟ್ಟು ಗ್ರಾಮ ಪಂಚಾಯತ್‌ನಿಂದ ನೀಡಲಾಗುವ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಇದರಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್,  ಮೀನುಗಾರಿಕೆ,  ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸಹ ಭಾಗವಹಿಸಲಿದ್ದಾರೆ.

ಈ ಬಾರಿಯ ಕಾರಂತ ಹುಟ್ಟೂರು ಪ್ರಶಸ್ತಿಯನ್ನು ನಟ ರಮೇಶ ಅರವಿಂದ್ ಅವರಿಗೆ ಪ್ರಧಾನ ಮಾಡಲಾಗುತ್ತಿದೆ. ಕೋಟದ ರಾಷ್ಟ್ರೀಯ ಹೆದ್ದಾರಿ ಸಮೀಪದ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 5000ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, ಇದಕ್ಕಾಗಿ  ಬೃಹತ್ ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ.

ಮೂಡಬಿದರೆ ಆಳ್ವಾಸ್‌ನಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಘಟಕರಾದ ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News