'ಪೊಲೀಸ್ ಭದ್ರತೆ ಇಲ್ಲದೇ ಮನೆಗೆ ಹೋಗು' ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಕಾನ್‌ಸ್ಟೆಬಲ್‌ ಅಮಾನತು

Update: 2022-10-08 18:08 GMT
ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ | ರಾಜಶೇಖರ ಖಾನಾಪುರ

ವಿಜಯಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿ, ಫೇಸ್‌ಬುಕ್‌ನಲ್ಲಿ ಕಮೆಂಟ್‌ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಗ್ರಾಮೀಣ ಠಾಣೆ ಕಾನ್ಸ್ ಟೆಬಲ್ ರಾಜಶೇಖರ ಖಾನಾಪುರ ಅಮಾನತು ಮಾಡಿ ಎಸ್ಪಿ ಎಚ್‌ಡಿ ಆನಂದಕುಮಾರ ಆದೇಶ ಮಾಡಿದ್ದಾರೆ.

‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜಶೇಖರ ಖಾನಾಪುರ ಸವಾಲು ಹಾಕಿದ್ದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 

ಪೇದೆಯ ಪೋಸ್ಟ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿತ್ತು. 

 ಫೇಸ್ ಬುಕ್ ಕಮೆಂಟ್ ಸ್ಕ್ರೀನ್ ಶಾಟ್ 

----------------------------------------------------

 ಕಳೆದ ವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ‘ಭಾರತ ಐಕ್ಯತಾ ಯಾತ್ರೆ’ ಆರಂಭವಾದ ದಿನ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ,  ‘ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಅವರ (ಬಿಜೆಪಿ)ಜತೆ ಶಾಮೀಲಾದರೆ ನಿಮಗೆ ತಕ್ಕ ಪಾಠ ಕಲಿಸುವ ಕಾಲ ಬರಲಿದೆ' ಎಂದು ಹೇಳಿದ್ದರು. ಸಿದ್ದರಾಮಯ್ಯ ಅವರ ಈ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿ,  ಕಾನ್ಸ್ ಟೆಬಲ್ ರಾಜಶೇಖರ ಖಾನಾಪುರ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಹಾಕಿರುವ ಸ್ಕ್ರೀನ್ ಶಾಟ್ ವೈರಲ್ ಆಗಿದೆ.

ಇದನ್ನೂ ಓದಿ: 'ಪೊಲೀಸ್ ಭದ್ರತೆ ಇಲ್ಲದೇ ಮನೆಗೆ ಹೋಗು': ಸಿದ್ದರಾಮಯ್ಯಗೆ ಕಾನ್‌ಸ್ಟೆಬಲ್‌ ಸವಾಲು

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News