ಷರತ್ತು ಉಲ್ಲಂಘಿಸಿದರೆ ಓಲಾ, ಉಬರ್ ವಾಹನಗಳ ಸೀಝ್: ಸಚಿವ ಬಿ.ಶ್ರೀರಾಮುಲು

Update: 2022-10-08 18:16 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 8:‘ಪರವಾನಗೆ ನೀಡುವ ವೇಳೆ ಸಾರಿಗೆ ಇಲಾಖೆ ವಿಧಿಸಿರುವ ಷರತ್ತು ಉಲ್ಲಂಘಿಸಿರುವ ಆ್ಯಪ್ ಆಧರಿತ ಓಲಾ, ಉಬರ್ ಮತ್ತು ರಾಪಿಡೋ ವಾಹನಗಳನ್ನು ಸೀಜ್ ಮಾಡಲು ಆದೇಶ ನೀಡಲಾಗಿದೆ' ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಿಯಮ ಉಲ್ಲಂಘಿಸಿ ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ವಾಹಗಳನ್ನು ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್‍ಗೆ ಆ ಸಂಸ್ಥೆಗಳಿಂದ ಉತ್ತರ ಪಡೆದು ಒಂದೆರಡು ದಿನದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಹೇಳಿದರು.

‘ಸಾರ್ವಜನಿಕ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೇವೆ ಒದಗಿಸಲು ಓಲಾ ಮತ್ತು ಊಬರ್ ಸಂಸ್ಥೆಗಳಿಗೆ ಲೈಸೆನ್ಸ್ ನೀಡಲಾಗಿತ್ತು. ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ನಿಯಮಗಳು ಉಲ್ಲಂಘನೆಯಾಗಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆದರೂ ಪ್ರತಿವರ್ಷ ಪ್ರಯಾಣಿಕರಿಂದ ದೂರುಗಳು ಬರುತ್ತಿವೆ. ಹೀಗಾಗಿ ಸರಕಾರ ಕ್ರಮಕ್ಕೆ ಮುಂದಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News