ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ 'ಗಂಧದ ಗುಡಿ' ಟ್ರೈಲರ್ ಬಿಡುಗಡೆ

Update: 2022-10-09 06:32 GMT
Photo: Twitter/@Ashwini_PRK

ಬೆಂಗಳೂರು: ಅಗಲಿರುವ ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಅಭಿನಯದ ಕೊನೆಯ ಸಿನಿಮಾ ‘ಗಂಧದ ಗುಡಿ’(Gandhada Gudi)  ಟ್ರೈಲರ್ ರವಿವಾರ ಬಿಡುಗಡೆ ಮಾಡಲಾಗಿದೆ. 

‘ಗಂಧದ ಗುಡಿ’ ಚಿತ್ರವು ಅಕ್ಟೋಬರ್ 28ರಂದು ಬಿಡುಗಡೆಯಾಗಲಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕೊನೆಯ ಬಾರಿ ದೊಡ್ಡ ಪರದೆಯಲ್ಲಿ ನೋಡಲು ಉತ್ಸುಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ‘ಗಂಧದ ಗುಡಿ’ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಇತ್ತೀಚೆಗೆ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ‘ಗಂಧದ ಗುಡಿ’ಯ ಬಿಡುಗಡೆಯ ದಿನಾಂಕವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದರು.

ಪುನೀತ್ ರಾಜ್ ಕುಮಾರ್ ಮುಖ್ಯ ಭೂಮಿಕೆಯಲ್ಲಿರುವ ಚಿತ್ರಕ್ಕೆ ಅಮೋಘ ವರ್ಷ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಪ್ರತೀಕ್ ಶೆಟ್ಟಿ ಸಿನಿಮಾಟೋಗ್ರಾಫರ್ ಆಗಿದ್ದಾರೆ.

“ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು. ಅಪ್ರತಿಮ ಪ್ರತಿಭೆ ಹೊಂದಿದ್ದರು. ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗೂ  ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು’’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗಕ್ಕೆ ಮೂರು ಹೆಸರು, ಚಿಹ್ನೆಗಳ ಪಟ್ಟಿಯನ್ನು ನೀಡಿದ ಉದ್ಧವ್ ಠಾಕ್ರೆ ಬಣ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News