×
Ad

ಚಿಕ್ಕಮಗಳೂರು: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ; ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಬಂಧನ

Update: 2022-10-09 14:33 IST

ಚಿಕ್ಕಮಗಳೂರು : ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಚೇಗೌಡ ಮತ್ತು ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಅವರ ನಡುವೆ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಈ ಸಂದರ್ಭ ಭೂ ವಿವಾದ ಪಂಚಾಯ್ತಿಗೆ ತೆರಳಿದ್ದವರ ಮೇಲೆ ದುಗ್ಗಪ್ಪ ಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News