ಮತಾಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಕುರಿತು ವಿವಾದ: ದಿಲ್ಲಿ ಆಪ್‌ ಸಚಿವ ರಾಜೀನಾಮೆ

Update: 2022-10-09 12:49 GMT
photo: @MissionJayBheem / Twitter

ಹೊಸದಿಲ್ಲಿ: ದಿಲ್ಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್(Rakendra Pal Gautam) ಶುಕ್ರವಾರ ನಗರದಲ್ಲಿ ನಡೆದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಹಾಜರಾಗಿದ್ದುದಕ್ಕಾಗಿ ಬಿಜೆಪಿ ಬೆಂಬಲಿಗರು ಭಾರೀ ಪ್ರತಿಭಟನೆಗಳನ್ನು ನಡೆಸಿದ ಬಳಿಕ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ndtv.com ವರದಿ ಮಾಡಿದೆ.

ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಹಿಂದೂ ದೇವತೆಗಳನ್ನು ಖಂಡಿಸಿದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ತೋರಿಸುವ ವೀಡಿಯೊ ವೈರಲ್ ಆಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಮತ್ತು ಹಿಂದೂ ದೇವತೆಗಳನ್ನು ದೇವರೆಂದು ಪರಿಗಣಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

ಘಟನೆಯ ಬಳಿಕ, ಬಿಜೆಪಿಯು ದಿಲ್ಲಿ ಮುಖ್ಯಮಂತ್ರಿ ಮತ್ತು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿ ಸಚಿವ ಗೌತಮ್ ರನ್ನು ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News