ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

Update: 2022-10-10 08:19 GMT
photo:PTI

ಹೊಸದಿಲ್ಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎಸ್. ಕೆ. ಕೌಲ್ ಮತ್ತು ಅಭಯ್ ಎಸ್. ಓಕಾ ಅವರನ್ನೊಳಗೊಂಡ  ಪೀಠವು ಅರ್ಜಿದಾರರಿಗೆ ಯಾವ ಮೂಲಭೂತ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕೇಳಿದೆ.

"ಇದು ನ್ಯಾಯಾಲಯದ ಕೆಲಸವೇ? ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಯಾವ ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ? ನೀವು ನ್ಯಾಯಾಲಯಕ್ಕೆ ಬಂದಿರುವುದರಿಂದ ನಾವು ಕಾನೂನನ್ನು ಗಾಳಿಗೆ ತೂರಬೇಕೇ?" ಪೀಠ ಪ್ರಶ್ನಿಸಿದೆ.

ಗೋಸಂರಕ್ಷಣೆ ಬಹಳ ಮುಖ್ಯ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಮುಂದೆ ವಾದಿಸಿದರು. ದಂಡ ವಿಧಿಸುವುದಾಗಿ ಪೀಠವು ವಕೀಲರಿಗೆ ಎಚ್ಚರಿಕೆ ನೀಡಿದ ನಂತರ ಅವರು ಮನವಿಯನ್ನು ಹಿಂತೆಗೆದುಕೊಂಡರು.

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಗೋವಂಶ್ ಸೇವಾ ಸದನ್ ಹಾಗೂ  ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News