ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Update: 2022-10-10 09:26 GMT

ಚಿತ್ರದುರ್ಗ, ಅ.10: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆಯಾಗಿದೆ.

ಬಂಧನದ ಅವಧಿ ಅಂತ್ಯಗೊಂಡಿದ್ದರಿಂದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

ಶಿವಮೂರ್ತಿ ಮುರುಘಾ ಶರಣರನ್ನು ಸೆಪ್ಟಂಬರ್ 1ರಂದು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ |  ಲೈಂಗಿಕ ಕಿರುಕುಳ ಪ್ರಕರಣ: ಮುರುಘಾಶ್ರೀಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News