ಹಂಸಲೇಖ ಆರೋಗ್ಯದ ಬಗ್ಗೆ ವದಂತಿ: ಪುತ್ರಿ ತೇಜಸ್ವಿನಿ ಸ್ಪಷ್ಟನೆ

Update: 2022-10-10 14:15 GMT
ಹಂಸಲೇಖ

ಬೆಂಗಳೂರು, ಅ. 10: ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಅಸಿಡಿಟಿ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಅವರ ಆರೋಗ್ಯದ ಬಗ್ಗೆ ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬ ಸದಸ್ಯರು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಅವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಸಣ್ಣ ಪ್ರಮಾಣದ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ರಾಜಾಜಿನಗರದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದ್ಯೊಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೊಂಚ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಹಂಸಲೇಖ ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ ಮಾಧ್ಯಮಗಳಲ್ಲಿ ಬಿತ್ತರಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಆತಂಕ ಇತ್ತು. ಆದರೆ, ವೈದ್ಯರು ಸ್ಪಷ್ಟಣೆ ನೀಡಿದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಸೇರಿದಂತೆ ಹಂಸಲೇಖ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಸ್ಪಷ್ಟನೆ: ‘ಮುಂಜಾನೆಯಿಂದ ನಮ್ಮ ತಂದೆ ಹಂಸಲೇಖಾ ಅವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ವದಂತಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ' ಎಂದು ಅವರ ಪುತ್ರಿ ತೇಜಸ್ವಿನಿ ಹಂಸಲೇಖ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬುಲ್ಡೋಜರ್‌ ನೀತಿಯಿಂದ ಪಕ್ಷಕ್ಕೆ ಪ್ರಯೋಜನವಿಲ್ಲ: ವರಿಷ್ಠರಿಗೆ ರಾಜ್ಯ ಬಿಜೆಪಿ ನಾಯಕರ ಸಂದೇಶ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News