ಐದು ಸಹಕಾರ ಸಂಘಗಳ ಜೊತೆ ಅಮುಲ್ ವಿಲೀನ: ಅಮಿತ್ ಶಾ

Update: 2022-10-10 17:32 GMT
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ

ಹೊಸದಿಲ್ಲಿ: ಅಮುಲ್ (Amul) ಅನ್ನು ಇತರ ಐದು ಸಹಕಾರ ಸಂಘಗಳೊಂದಿಗೆ(Cooperative Societies) ವಿಲೀನಗೊಳಿಸಿ ಬಹು-ರಾಜ್ಯ ಸಹಕಾರ ಸಂಘ (ಎಂಎಸ್‌ಸಿಎಸ್) ರಚಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಈಶಾನ್ಯ ಮಂಡಳಿಯ (ಎನ್‌ಇಸಿ) 70ನೇ ಸರ್ವಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಶಾ, ವಿಲೀನ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೈಸರ್ಗಿಕ ಕೃಷಿ ಮತ್ತು ಡಿಜಿಟಲ್ ಕೃಷಿಗೆ ಆದ್ಯತೆ ನೀಡುತ್ತಿದೆ. ನೈಸರ್ಗಿಕ ಉತ್ಪನ್ನಗಳ ಪ್ರಮಾಣೀಕರಣಕ್ಕಾಗಿ ಅಮುಲ್ ಮತ್ತು ಇತರ ಐದು ಸಹಕಾರ ಸಂಘಗಳನ್ನು ವಿಲೀನಗೊಳಿಸಿ ಬಹು-ರಾಜ್ಯ ಸಹಕಾರಿ ಸಂಘವನ್ನು ರಚಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ’ ಎಂದು ಅವರು ಹೇಳಿದರು. 

ಎಂಎಸ್‌ಸಿಎಸ್ ತನ್ನ ಪ್ರಮಾಣೀಕರಣದ ನಂತರ ಉತ್ಪನ್ನಗಳ ರಫ್ತು ಮಾಡುವುದನ್ನು ಖಚಿತಪಡಿಸುತ್ತದೆ ಇದರಿಂದ ಲಾಭವು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹೋಗುತ್ತದೆ ಎಂದು ಅವರು ಹೇಳಿದರು.

ಗುಜರಾತ್ ಕೋಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ತನ್ನ ಉತ್ಪನ್ನಗಳನ್ನು ಅಮುಲ್ ಬ್ರಾಂಡ್ ಅಡಿಯಲ್ಲಿ ಮಾರಾಟ ಮಾಡುತ್ತಿದೆ.

ಇದಕ್ಕೂ ಮುನ್ನ ಶುಕ್ರವಾರ, ಗ್ಯಾಂಗ್‌ಟಾಕ್‌ನಲ್ಲಿ ನಡೆದ ಈಶಾನ್ಯ ಸಹಕಾರಿ ಡೈರಿ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಶಾ, ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ್ದರು. 

"ಭೂತಾನ್, ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಂತಹ ದೇಶಗಳಿಗೆ ಹಾಲನ್ನು ತಲುಪಿಸಲು ನಮಗೆ ದೊಡ್ಡ ಅವಕಾಶವಿದೆ ಮತ್ತು ಈ ವಿಶ್ವ ಮಾರುಕಟ್ಟೆಯನ್ನು ಅನ್ವೇಷಿಸಲು, ಸರ್ಕಾರವು ರಫ್ತು ಕೇಂದ್ರವಾಗಿ ಕಾರ್ಯನಿರ್ವಹಿಸುವ ಬಹು-ರಾಜ್ಯ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸುತ್ತಿದೆ" ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪ್ರಧಾನಿಯಾಗುವ ಅವಕಾಶವನ್ನು ಎರಡು ಬಾರಿ ಕಳೆದುಕೊಂಡಿದ್ದ ಮುಲಾಯಂ ಸಿಂಗ್ ಯಾದವ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News