×
Ad

ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಾಳೆ ನೇಮಕ

Update: 2022-10-11 11:54 IST
ಪ್ರಸನ್ನ ಬಿ. ವರಾಲೆ  (Photo credit- bombayhighcourt.nic.in)

ಬೆಂಗಳೂರು: ಬಾಂಬೆ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ಪಿ. ಬಿ. ವರಾಳೆ  ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ  ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ.  'ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವಾರಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ' ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News