ವಿದ್ಯಾರ್ಥಿನಿ ಮೇಲೆ BMTC ಬಸ್ ಹರಿದ ಪ್ರಕರಣ: ಮುಂದುವರಿದ ವಿದ್ಯಾರ್ಥಿಗಳ ಧರಣಿ

Update: 2022-10-11 09:15 GMT

ಬೆಂಗಳೂರು, ಅ.11:  ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಇಂದೂ(ಮಂಗಳವಾರ) ಕೂಡ ಧರಣಿ ಮುಂದುವರಿಸಿದ್ದಾರೆ.

ಗಾಯಾಳು ವಿದ್ಯಾರ್ಥಿನಿ ಶಿಲ್ಪಾ ಅವರ ಗೆಳತಿ ರಾಧಿಕಾ ಎಂಬುವರು ನೀಡಿದ ದೂರಿನ್ವಯ ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿದ್ದು, ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿನಿ ಶಿಲ್ಪಾಶ್ರೀ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 

''ವಿದ್ಯಾರ್ಥಿನಿ ಶಿಲ್ಪಾ ಸ್ಥಿತಿ ಗಂಭೀರವಾಗಿದ್ದು, ನಿನ್ನೆಯಿಂದ ಧರಣಿ ನಡೆಸುತ್ತಿದ್ದರೂ ಈವರೆಗೂ ಯಾವುದೇ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಇನ್ನು ವಿವಿ ಆವರಣದ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು'' ಎಂದು ಧರಣಿ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: BMTC ಬಸ್ ಹರಿದು ವಿದ್ಯಾರ್ಥಿನಿ ಗಂಭೀರ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News