×
Ad

ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

Update: 2022-10-11 19:04 IST

ಉಡುಪಿ, ಅ.11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮ ಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡ ಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರಾ ಗಿರಬೇಕು ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲೂ ಮೂರು ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ಆಸಕ್ತ ಕಲಾತಂಡಗಳು ಅಕ್ಟೋಬರ್ 17ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ-576101 ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿದೆ ಮೊ.ಸಂ.: 9964141590ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News