×
Ad

ಉಡುಪಿ: ವಿದ್ಯಾರ್ಥಿನಿಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ

Update: 2022-10-11 19:05 IST

ಉಡುಪಿ, ಅ.11: ಸಮಾಜ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಉಡುಪಿ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ನಗರದ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲೆಯ ಅಂತಿಮ ವಷರ್ದ ಪದವಿ ನಿಲಯದ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡ ಆರು ದಿನಗಳ ಕೌಶಲ್ಯ ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕರಾದ ದೀಪ, ಜಯಂತಿ, ಜೂನಿಯರ್ ವಾರ್ಡನ್ ಫರೀದಾ, ನಾಂದಿ ಫೌಂಡೇಶನ್‌ನ ತರಬೇತುದಾರರಾದ ಕಾವ್ಯ, ಪತ್ರಾಂಕಿತ ವ್ಯವಸ್ಥಾಪಕ ರೋಷನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News