ಅಪಘಾತ ಹೆಚ್ಚಳಕ್ಕೆ ಮದ್ಯಪಾನ ಪ್ರಮುಖ ಕಾರಣ: ಪ್ರಮೋದ್ ಕುಮಾರ್

Update: 2022-10-11 14:10 GMT

ಉಡುಪಿ, ಅ.11: ಇಂದು ಅಪಘಾತಗಳ ಪ್ರಮಾಣ ಹೆಚ್ಚಳಕ್ಕೆ ಮದ್ಯಪಾನ ಸೇವನೆ ಚಟವೇ ಪ್ರಮುಖ ಕಾರಣವಾಗಿದೆ. ಮನೆಗಳ ಕುಟುಂಬ ಸದಸ್ಯರು ಮತ್ತು ಸಮಾಜ ನೆಮ್ಮದಿಯ ಬದುಕು ನಡೆಸಬೇಕಾದರೆ ಮದ್ಯಪಾನದಂತಹ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟ ಮುಕ್ತ ಸಮಾಜ ಸಾತ್ವಿಕ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ಹಾಗೂ ಕಾಪು ತಾಲೂಕು ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗ ದಲ್ಲಿ ಸೋಮವಾರ ಪುತ್ತೂರಿನ ಭಗವತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾದ 1601ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಚ್ಚುತ ಪೂಜಾರಿ, ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಸಿದ್ಧರಾಜು, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಹರೀಶ್ ಕೋಟ್ಯಾನ್, ಪ್ರಗತಿಬಂಧು ಸ್ವಸಹಾಯ ಸಂಘ ಕೇಂದ್ರ ಒಕ್ಕೂಟ ಉಡುಪಿ ತಾಲೂಕು ಅಧ್ಯಕ್ಷೆ ಶಮಿತಾ ಪಿ.ಶೆಟ್ಟಿ, ನಗರಸಭೆ ಸದಸ್ಯರಾದ ಜಯಂತಿ ಪೂಜಾರಿ, ಸುಂದರ ಕಲ್ಮಾಡಿ, ಶಿಬಿರದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳಾದ ಶಿವಕುಮಾರ್ ಅಂಬಲಪಾಡಿ, ಮಮತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಯೋಗೀಶ್, ಶಂಕರ್ ಶೆಟ್ಟಿ, ಜನಾದರ್ನ ತೋನ್ಸೆ, ಶೀಲಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸಾದ್ ರಾವ್ ಅಧ್ಯಕ್ಷತೆ ವಹಿಸಿದ್ದರು.  ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ. ಸ್ವಾಗತಿಸಿದರು. ಕಾಪು ಯೋಜನಾಧಿಕಾರಿ ಜಯಂತಿ ವಂದಿಸಿದರು. ಟ್ರಸ್ಟ್‌ನ ಮಲ್ಪೆ ಮೇಲ್ವೀಚಾರಕಿ ಮೂಕಾಂಬಿಕಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News